
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ರಾಜ್ಯಕ್ಕೆ ಭೇಟಿ ನೀಡಿ ಹೋಗಿದ್ದರೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಸಮ್ಮತಿ ಸೂಚಿಸಿದಂತೆ ಕಂಡುಬಂದಿಲ್ಲ. ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಮತ್ತಷ್ಟು ವಿಳಂಬ ಧೋರಣೆ ಅನುಸರಿಸುತ್ತಿರುವಾದರೂ ಯಾಕೆ ಎಂಬ ಪ್ರೆಶ್ನೆ ಎಲ್ಲರಲ್ಲಿ ಮೂಡುತ್ತಿದೆ.
ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಅಮಿತ್ ಶಾ ಅವರು ದೆಹಲಿಗೆ ಹೋಗಿ ಚರ್ಚಿಸಿ ನಿರ್ಧರಿಸುವುದಾಗಿ ಹೇಳಿದ್ದಾರೆ ಎಂದಿದ್ದಾರೆ.
ರಾಜ್ಯದಲ್ಲಿ ಡಿಸಿಎಂ ಹುದ್ದೆ ಸೃಷ್ಟಿಯಾಗಲಿದೆ ಎಂಬುದು ಕೇವಲ ಊಹಾಪೋಹ. ನಮ್ಮಲ್ಲಿ ಯಾವುದೇ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಅಗತ್ಯವಿಲ್ಲ ಅಂತಹ ಚರ್ಚೆಯೂ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಂದಿನ ವಾರ ಜಿಲ್ಲಾಧಿಕಾರಿಗಳ, ಸಿಇಓಗಳ ಜತೆ ಸಭೆ ನಡೆಸುತ್ತೇನೆ. ವಿವಿಧ ಇಲಾಖೆ ಅಭಿವೃದ್ಧಿ, ಅನುಷ್ಠಾನದ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಭೋವಿ ಅಭಿವೃದ್ಧಿ ನಿಗಮದ ನಿರ್ದೇಶಕರ ವಿರುದ್ಧ FIR ದಾಖಲು