
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಹಲವು ದಿನಗಳಿಂದ ಆರಂಭವಾಗಿದ್ದ ಚರ್ಚೆಗೆ ಕೊನೆಗೂ ತೆರೆಬಿದ್ದಿದೆ. ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಇಂದು ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಸಚಿವ ಸಂಪುಟ ಪುನಾರಚನೆಗೆ ಸಮ್ಮತಿ ಸೂಚಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೊಂದಿಗೆ ಚರ್ಚಿಸಿ ಸಂಪುಟ ಪುನಾರಚನೆ ಮಾಡಿ ಎಂದು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಸಚಿವ ಸಂಪುಟ ಪುನಾರ್ಚನೆ ವೇಳೆ 8-12 ಸಚಿವರ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಚಟುವಟಿಕೆ ಗರಿಗೆದರಿದೆ.


