ಪ್ರಗತಿವಾಹಿನಿ ಸುದ್ದಿ: ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯ ಸರ್ಕಾರಿ ನೌಕರರ ಎರಡು ಪ್ರಮುಖ ಬೇಡಿಕೆಗಳಿಗೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ.
ನಾಳೆ ಸಂಜೆ 6 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ 7ನೇ ವೇತನ ಆಯೋಗ ವರದಿ ಜಾರಿ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. 7ನೇ ವೇತನ ಆಯೋಗ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕರೆ ಆಗಸ್ಟ್ ನಿಂದಲೇ ಜಾರಿಗೆ ಬರಲಿದೆ.
ರಾಜ್ಯ ಸರ್ಕಾರಿ ನೌಕರ ವೇತನ ಪರಿಷ್ಕರಣೆಯಾಗಲಿದ್ದು, ಇದಕ್ಕಾಗಿ 17,000 ಕೋಟಿ ರೂ ಅಗತ್ಯವಿದೆ. ಇನ್ನು ಎನ್ ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿ ಕುರಿತು ನಾಳಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ರಾಜ್ಯ ಸರ್ಕಾರಿ ನೌಕರರ ಈ ಎರಡು ಬೇಡಿಕೆಗಳ ಬಗ್ಗೆ ನಾಳಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಗುವ ನಿರೀಕ್ಷೆ ಇದೆ. ಒಂದು ವೇಳೆ ತಮ್ಮ ಬೇಡಿಕೆ ಈಡೇರಿಸದಿದ್ದರೆ ಜುಲೈ 30ರಿಂದ ರಾಜ್ಯಾದ್ಯಂತ ಕೆಲಸಕ್ಕೆ ಗೈರಾಗುವ ಮೂಲಕ ಅನಿರ್ಧಿಷ್ಟಾವದಿ ಮುಷ್ಕರ ಆರಂಭಿಸುವುದಾಗಿ ಸರ್ಕಾರಿ ನೌಕರರು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ ಮಹತ್ವದ್ದಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ