Belagavi NewsBelgaum NewsKannada NewsKarnataka NewsLatest

*ಮೂಢ ನಂಬಿಕೆಗೆ ಸೆಡ್ಡು: ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಫೆಬ್ರುವರಿ 15 ರಂದು ಚಾಮರಾಜ ನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯದ ಸಚಿವ ಸಂಪುಟ ಸಭೆ ಜರುಗಲಿದೆ. ಇದರಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ ಎಂದು ಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್.ಚಂದ್ರಶೇಖರ್ ತಿಳಿಸಿದ್ದಾರೆ.

ಕೆಲವು ಮಾಧ್ಯಮಗಳಲ್ಲಿ ಸಚಿವ ಸಂಪುಟ ಸಭೆಯು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸುದ್ದಿ ಪ್ರಕಟವಾಗಿದೆ. ಆದರೆ ಯಾವುದೇ ಬದಲಾವಣೆಗಳಾಗಿಲ್ಲ ಪೂರ್ವನಿರ್ಧಾರದಂತೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿಯೇ ಸಚಿವ ಸಂಪುಟ ಸಭೆ ಜರುಗಲಿದೆ ಎಂದು ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದರೆ ಮುಖ್ಮಂತ್ರಿಸ್ಥಾನ ಹೋಗುತ್ತದೆ ಎನ್ನುವ ಮೂಢ ನಂಬಿಕೆಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಇಡೀ ಸಚಿವಸಂಪುಟ ಸಭೆಯೇ ಮಲಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button