Kannada NewsKarnataka NewsLatest

*BREAKING: ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಸಂಘ-ಸಂಸ್ಥೆಗಳ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ*

ಪ್ರಗತಿವಾಹಿನಿ ಸುದ್ದಿ: ಇನ್ಮುಂದೆ ಸರ್ಕಾರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಂಘ, ಸಂಸ್ಥೆಗಳು ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ. ಹೀಗೊಂದುವೇಳೆ ಕಾರ್ಯಕ್ರಮ ನಡೆಸಬೇಕೆಂದರೆ ಪೂರ್ವಾನುಮತಿ ಕಡ್ಡಾಯ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರಿ ಜಾಗಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ನಿರ್ಬಂಧವಿಧಿಸಲಾಗುವುದು. ಸರ್ಕಾರಿ ಜಾಗಗಳಲ್ಲಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ನಿರ್ಧರಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಕೊಂಚ ಬ್ರೇಕ್ ಹಾಕಲು ಸರ್ಕಾರ ತೀರ್ಮಾನಿಸಿದೆ.

ಈ ಬಗ್ಗೆ ಪ್ರತಿಕ್ರೊಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಯಾವುದೇ ಸಂಘಟನೆಯನ್ನು ನಾವು ನಿಷೇಧ ಮಾಡುತ್ತಿಲ್ಲ. ಆದರೆ ಸಂಘ-ಸಂಸ್ಥೆಗಳು ಸರ್ಕಾರಿ ಜಾಗಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮನಸ್ಸಿಗೆ ಬಂದಂತೆ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಖಾಸಗಿ ಕಾರ್ಯಕ್ರಮಕ್ಕೆ ಪೂರ್ವಾನುಮತಿ ಕಡ್ಡಾಯ ಮಾಡಲಗುವುದು. ಈ ನಿಟ್ಟಿನಲ್ಲಿ ಹೊಸ ನಿಯಮವನ್ನು ಕಾನೂನಾತ್ಮಕವಾಗಿ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದರು.

Home add -Advt

Related Articles

Back to top button