Kannada NewsKarnataka NewsPolitics

*ಸ್ಟಿಂಗ್ ಆಪರೇಷನ್ ನಡೆಯುತ್ತಿದೆ ಹುಷಾರಾಗಿರಿ: ಸಚಿವರಿಗೆ ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಏಜೆನ್ಸಿಗಳ ಮೂಲಕ ರಾಜ್ಯ ಸರ್ಕಾರದ ಸಚಿವರ ಮೇಲೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸ್ಟಿಂಗ್ ಆಪರೇಷನ್ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಸ್ಫೋಟಕ ,ಮಾಹಿತಿ ನೀಡಿದ್ದಾರೆ. ಬಿಜೆಪಿ-ಜೆಡಿಎಸ್ ನಾಯಕರು ಸಚಿವರನ್ನು ಟ್ರ್ಯಾಪ್ ಮಾಡಲು ಯತ್ನಿಸುತ್ತಿದ್ದಾರೆ. ಖಾಸಗಿ ಏಜೆನ್ಸಿ ಮೂಲಕ ಸ್ಟಿಂಗ್ ಆಪರೇಷನ್ ಮಾಡುತ್ತಿದ್ದಾರೆ. ಸಚಿವರೆಲ್ಲರೂ ಎಚ್ಚರದಿಂದ ಇರಿ ಎಂದು ಸಿಎಂ ವಾರ್ನಿಂಗ್ ನೀಡಿದ್ದಾರೆ.

ಗುಪ್ತಚರ ಇಲಾಖೆ ವರದಿ ಆಧರಿಸಿ, ಯಾರ್ಯಾರ ಮೇಲೆ ಕಣ್ಣಿಡಲಾಗಿದೆ ಎಂಬ ಪಟ್ಟಿ ನೀಡಿ ಸಚಿವರಿಗೆ ಹೈ ಅಲರ್ಟ್ ಆಗಿರುವಂತೆ ಸಿಎಂ ಸೂಚಿಸಿದರು. ಯಾರ್ಯಾರು ಏನು ಮಾಡುತ್ತಿದ್ದಾರೆ. ಏನು ಕೆಲಸದಲ್ಲಿದ್ದಾರೆ ಎಲ್ಲವನ್ನೂ ಏಜೆನ್ಸಿ ಮೂಲಕ ಗಮನಿಸುತ್ತಿದ್ದಾರೆ. ನಿಮ್ಮೆಲರ ಮೇಲೆ ನಿಗಾ ಇಡಲಾಗಿದೆ. ಈ ಬಗ್ಗೆ ಸಚಿವರುಗಳು ಎಚ್ಚೆತ್ತುಕೊಳ್ಳಬೇಕು ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button