Latest

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು, ಅದರಲ್ಲೂ ಮುಖ್ಯವಾಗಿ ಸೋಂಕು ಮಿತಿ ಮೀರುತ್ತಿರುವ ರಾಜಧಾನಿ ಬೆಂಗಳೂರಿನಲ್ಲಿ 8 ವಲಯ ರಚನೆ ಮಾಡಿ ಒಬ್ಬೊಬ್ಬ ಸಚಿವರಿಗೆ ಒಂದೊಂದು ವಲಯದ ಉಸ್ತುವಾರಿಯಾಗಿ ನೇಮಕ ಮಾಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಿಗೆ ವೈದ್ಯರ ನೇಮಕಾತಿ ಕುರಿತು ಚರ್ಚಿಸಲಾಗಿದೆ. ವೈದ್ಯರು ಸಲ್ಲಿಸಿರುವ ಸೇವಾ ಅವಧಿ ಆಧಾರದ ಮೇರೆ ಖಾಯಂ ಮಾಡಲಿದ್ದೇವೆ. ಪ್ರತಿ ಆರು ತಿಂಗಳು ಸೇವಾ ಅವಧಿಗೆ 2.5 ಕೃಪಾಂಕ ನೀಡಲು ತಿರ್ಮಾನಿಸಲಾಗಿದೆ ಎಂದು ತಿಳಿಸಿದರು.

ಕರೋನಾ ತಡೆಗಟ್ಟಲು ಬೆಂಗಳೂರಿನಲ್ಲಿ ಎಂಟು ವಲಯಗಳನ್ನು ಗುರುತಿಸಲಾಗಿದ್ದು, ಬೆಂಗಳೂರಿಗೆ ಸೇರಿದ ಸಚಿವರು ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವ ನಾಥ್ ಅವರಿಗೆ ಉಸ್ತುವಾರಿ ನೀಡಲಾಗಿದೆ. ಇಂದು ಸಂಜೆ ವೇಳೆಗೆ ಮತ್ತೊಂದು ಸುತ್ತಿನ ಸಭೆ ನಡೆಸಲಿರುವ ಮುಖ್ಯಮಂತ್ರಿ ಯಡಿಯೂಡಿರಪ್ಪ ಅವರು ಯಾವ ಸಚಿವರಿಗೆ ಯಾವ ವಲಯ ನೀಡಬೇಕು ಎಂದು ಚೆರ್ಚಿಸಿ ವಿಂಗಡಣೆ ಮಾಡಲಿದ್ದಾರೆ. ಜಿಲ್ಲಾವಾರು ನಿಗಾವಹಿಸಲು ಮುಖ್ಯಮಂತ್ರಿಗಳು ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ.ವೀಕೆಂಡ್ ಲಾಕ್‌ ಡೌನ್ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ತಂಡ ರಚನೆ ಮಾಡಲಾಗಿದ್ದು, ಅವರಿಗೆ ಜವಬ್ದಾರಿ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ಬಂಡವಾಳ ಹೂಡಲು ಅನುಕೂಲವಾಗುವಂತೆ ಮಧ್ಯವರ್ತಿಯಾಗಿ ಹಾಗೂ ಜ್ಞಾನಾಧಾರಿತ ಸಹಯೋಗಕ್ಕಾಗಿ ಖಾಸಗಿ ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಪ್ರೈವೇಟ್ ಲಿಮಿಟೆಡ್ ಏಜೆನ್ಸಿಯನ್ನು 12 ಕೋಟಿ ರೂ., 12 ತಿಂಗಳು ಮುಂದುವರೆಸಲು ಸಂಪುಟ ಒಪ್ಪಿಗೆ ಸೂಚಿಸಿದೆ. 184.37 ಕೋಟಿ ರೂ ಮೊತ್ತದಲ್ಲಿ ಇ-ಪ್ರೊಕ್ಯೂರ್ಮೆಂಟ್ 2.0 ಯೋಜನೆಯನ್ನು ‘ಅಭಿವೃದ್ದಿ ಮತ್ತು ಅನುಷ್ಠಾನ’ಕ್ಕೆ ತರಲು ಸಾರ್ವಜನಿಕ-ಸರ್ಕಾರಿ ಸಹಭಾಗಿತ್ವದಲ್ಲಿ ಮಾದರಿ ರೂಪಿಸಲು ಏಳು ವರ್ಷಗಳಿಗೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಹೇಳಿದರು.

Home add -Advt

ವಿದ್ಯುತ್ ಕಂಪನಿಗಳಿಗೆ ಬಡ್ಡಿ ರಹಿತ 2500 ಕೋಟಿ ರೂ. ಸಾಲ ಮಂಜೂರು ಮಾಡಲಾಗುವುದು. 200 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ವಿಮಾನ ನಿಲ್ದಾಣ ಪ್ರಾರಂಭಸಲು ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಹೈ ಫ್ಲೋ ಆಕ್ಸಿಜನ್ ಸಿಸ್ಟಮ್, ಬೆಡ್ ವ್ಯವಸ್ಥೆಗೆ ಹಣ ಮಂಜೂರು, ಜಿಲ್ಲಾ ಆಸ್ಪತ್ರೆಗಳಿಗೆ 207 ಕೋಟಿ ರೂ. ಹಣ ಮಂಜೂರು ಮಾಡಲು ಒಪ್ಪಿಗೆ ನೀಡಲಾಗಿದೆ. ತುರ್ತು ಕೆಲಸಗಳಿಗೆ 95 ಕೋಟಿ ಹಣ ಬಿಡುಗಡೆಗೆ ಅನುಮೋದನೆ ನೀಡಿದೆ ಎಂದು ವಿವರಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button