
ಪ್ರಗತಿವಾಹಿನಿ ಸುದ್ದಿ: ನಿನ್ನೆ ಕಾವೇರಿ ನಿವಾಸಕ್ಕೆ ತೆರಳಿ ಸಿಎಂ ಸಿದ್ದರಾಮಯ್ಯನವರ ಆರೋಗ್ಯವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಚಾರಿಸಿದ್ದಾರೆ. ಈ ವೇಳೆ ಸಂಪುಟ ಪುನರಚನೆ ಮತ್ತು ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ವಿದ್ಯಾಮಾನಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಮಾಹಿತಿ ಪ್ರಕಾರ ಯುಗಾದಿ ಬಳಿಕ ಸಂಪುಟ ಪುನರಚನೆಯಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಪಕ್ಷದೊಳಗೆ ಚರ್ಚೆಯಾಗುತ್ತಿದೆ. ಒಂದುವೇಳೆ ಪುನರಚನೆಯಾದಲ್ಲಿ ಐದಾರು ಸಚಿವರಿಗೆ ಕೊಕ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಕುರಿತಂತೆ ಯುಗಾದಿ ಬಳಿಕ ಅಂದ್ರೆ ಮುಂದಿನ ತಿಂಗಳು ಸಿಎಂ ದೆಹಲಿಗೆ ತೆರಳುವ ಸಾಧ್ಯತೆ ಇದೆ.
ಪ್ರಾಥಮಿಕವಾಗಿ ಖರ್ಗೆಯವರ ಬಳಿ ಸಿಎಂ ನಿನ್ನೆ ಚರ್ಚೆ ನಡೆಸಿದರು ಸಹ ರಾಹುಲ್ ಗಾಂಧಿ ಸೇರಿದಂತೆ ದೆಹಲಿ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿ ಸಂಪುಟ ಪುನರಚನೆ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಇದರ ಜೊತೆ, ಹನಿಟ್ರ್ಯಾಪ್, ಪರಿಷತ್ ಖಾಲಿ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.