ಪ್ರಗತಿವಾಹಿನಿ ಸುದ್ದಿ: ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರಾ? ಎಂಬ ಚರ್ಚೆ ಆರಂಭವಾಗಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ.
ಹೊಸ ವರ್ಷದಲ್ಲಿ ಹೊಸ ಸಂಪುಟ ರಚನೆಯಾಗಲಿದೆಯಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ಜೊತೆ ಮಾತನಾಡುತ್ತೇನೆ. ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಸಂಪುಟಕ್ಕೆ ಸರ್ಜರಿಯಾಗಲಿದೆಯೇ? ಎಂಬ ಚರ್ಚೆ ಆರಂಭವಾಗಿದೆ. ಹಾಲಿ ಕೆಲ ಸಚಿವರ ಖಾತೆ ಬದಲಾವಣೆ ಜೊತೆಗೆ ಹೊಸ ಸಚಿವರ ನೇಮಕ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ