1962 ಟೋಲ್ ಫ್ರೀ ಸಂಖ್ಯೆಗೆ ಕರೆಮಾಡಿ ಉಚಿತ ತುರ್ತು ಪಶುವೈದ್ಯಕೀಯ ಸೇವೆ ಪಡೆಯಿರಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕಗಳಲ್ಲಿ ಪಶು ಸಂಜೀವಿನಿ ಯೋಜನೆಯಡಿಯಲ್ಲಿ ಸಂಚಾರಿ ವಾಹನ ಘಟಕದ ಮೂಲಕ ರೈತರ ಮನೆ ಬಾಗಿಲಿಗೆ ತುರ್ತು ಪಶು ಚಿಕಿತ್ಸಾ ಸೇವೆಯನ್ನು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 17 ವಾಹನಗಳು ಕಾರ್ಯನಿರ್ವಹಿಸುತ್ತಿವೆ. ರೈತರು ತಮ್ಮ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ಪಡೆಯಲು 1962 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡುವುದರ ಮುಖಾಂತರ ಸೇವೆ ಪಡೆಯಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ. ರಾಜೀವ ಕೂಲೇರ್ ತಿಳಿಸಿದ್ದಾರೆ.
ಜೂನ್ ತಿಂಗಳಲ್ಲಿ ಒಟ್ಟು 1092 ತುರ್ತು ಕರೆ ಸ್ವೀಕರಿಸಿ ಒಟ್ಟು 2196 ಜಾನುವಾರುಗಳಿಗೆ ರೈತರ ಮನೆ ಬಾಗಿಲಿನಲ್ಲಿ ತುರ್ತು ಚಿಕಿತ್ಸೆ ನೀಡಲಾಗಿದೆ.
ಪ್ರವಾಹ/ಅತಿವೃಷ್ಟಿ ಸಂಭವನೀಯವಿದ್ದು, ಅಂತಹ ಸಂದರ್ಭಗಳಲ್ಲಿಯೂ ಸಹಿತ ಬಾದಿತ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ಅವಶ್ಯವಿದ್ದಲ್ಲಿ ರೈತರು ಜಾನುವಾರುಗಳಿಗೆ ತುರ್ತು ಚಿಕಿತ್ಸೆ ಪಡೆಯಲು 1962 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡುವುದರ ಮುಖಾಂತರ ಜಿಲ್ಲೆಯ ಎಲ್ಲ ರೈತಬಾಂದವರು ಸೇವೆ ಪಡೆಯಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ. ರಾಜೀವ ಕೂಲೇರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ