
ಅತ್ಯುನ್ನತ ಯೋಗ ಪ್ರಶಸ್ತಿಗೆ ಅರ್ಜಿ ಆಹ್ವಾನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕರ್ನಾಟಕ ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ ಕ್ರೀಡಾಪಟುಗಳಿಗೆ ಅಥವಾ ಯೋಗ ಸಂಸ್ಥೆಗಳಿಗೆ ಮಾನ್ಯ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಮಟ್ಟ ಅಥವಾ ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಯೋಗ ಪ್ರಶಸ್ತಿಯನ್ನು ಘೋಷಿಸಿದ್ದು, ಅರ್ಜಿ ಆಹ್ವಾನಿಸಲಾಗಿದೆ.
‘Prime Minister’s Award for Yoga for ೨೦೨೫ ಪ್ರಶಸ್ತಿಗಾಗಿ ಅರ್ಜಿಗಳನ್ನು ಆನಲೈನ್ ವೆಬ್‌ಸೈಟ್: https://innovateindia.mygov.in/pm-yoga-awards -೨೦೨೫/ ಮೂಲಕ ಮಾರ್ಚ್ ೩೧, ೨೦೨೫ ರ ಒಳಗಾಗಿ ಸಲ್ಲಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರವಾಸೋದ್ಯಮ ಇಲಾಖೆ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ
೨೦೨೪-೨೫ ನೇ ಸಾಲಿನ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪ್ರವಾಸೋದ್ಯಮ/ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಲ್ಟಿ ಕ್ಯೂಸಿನ್ ಕುಕ್ ವಿಷಯದ ೨ನೇ ಹಂತದ (೨ಟಿಜ ಃಚಿಣಛಿh) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಮತ್ತು ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರಗಳಾದ ಮೈಸೂರಿನ ಫುಡ್‌ಕ್ರಾಫ್ಟ್ ಇನ್‌ಸ್ಟಿಟ್ಯೂಟ್ ಹಾಗೂ ಬೆಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಅವರ ಮೂಲಕ ಮಲ್ಟಿ ಕ್ಯೂಸಿನ್ ಕುಕ್ ವಿಷಯದ ೨ನೇ ಹಂತದ (2nd Batch) ವಸತಿ ಸಹಿತ ತರಬೇತಿ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಮಲ್ಟಿ ಕ್ಯೂಸಿನ್ ಕುಕ್ ತರಬೇತಿ ಪಡೆದವರಿಗೆ ಹೋಟೆಲ್, ರೆಸಾರ್ಟ, ರೆಸ್ಟೋರೆಂಟ್ ಹಾಗೂ ಸ್ವ-ಉದ್ಯೋಗದಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳು ದೊರಕಲಿವೆ.
೮ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ Multi Cuisine Cook ತರಬೇತಿಯನ್ನು IHM, Banglore ಹಾಗೂ FCI Mysore ಸಂಸ್ಥೆಗಳಲ್ಲಿ ಹಾಗೂ ೧೦ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ Food & Beverage Service Steward ತರಬೇತಿಯನ್ನು FCI Mysore ಸಂಸ್ಥೆಯಲ್ಲಿ ತರಬೇತಿ ನೀಡಲಾಗುವುದು.
ಆಸಕ್ತ ಅರ್ಹ ಅಭ್ಯರ್ಥಿಗಳು ಏಪ್ರಿಲ್ ೨, ೨೦೨೫ರ ಒಳಗಾಗಿ ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಸುವರ್ಣ ವಿಧಾನ ಸೌಧ, ತಳ ಮಹಡಿ, ಪೂರ್ವಧ್ವಾರ ಪ್ರವೇಶ, ಕೊಠಡಿ ಸಂಖ್ಯೆ-ಟಿ.ಪಿ-೧೪, ಹಲಗಾ, ಬೆಳಗಾವಿ ಇಲ್ಲಿ ನಿಗಧಿತ ಅರ್ಜಿಗಳನನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೧-೨೪೭೦೮೭೯ ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರವಾಸೋದ್ಯಮ ಇಲಾಖೆ: ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
೨೦೨೪-೨೫ ನೇ ಸಾಲಿನ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸಿ ತಾಣಗಳನ್ನು ಉತ್ತೇಜಿಸಿ ಪ್ರಚಾರ ಪಡಿಸಲು ಪರಿಶಿಷ್ಟ ಜಾತಿಗೆ ಸೇರಿದ ೨೯ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ೧೯ ಅಭ್ಯರ್ಥಿಗಳಿಗೆ ಒಂದು ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸದರಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಜಾಕೆಟ್ ಹಾಗೂ ಒಂದು ಜೊತೆ ಸ್ಪೋರ್ಟ್ಸ ಶೂ (Shoe) ಒದಗಿಸಲಾಗುವುದು.
ಬೆಳಗಾವಿ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿ ಮಾರ್ಗರ್ಶಿಗಳಾಗಿ ಕಾರ್ಯನಿರ್ವಹಿಸಲು KTTF Rules ೨೦೧೬ ರನ್ವಯ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಉಪ ನಿರ್ದೇಶಕರ ಕಛೇರಿಯಿಂದ ನಿಗಧಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಏಪ್ರಿಲ್ ೯, ೨೦೨೫ರ ಒಳಗಾಗಿ ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಬೆಳಗಾವಿ ವಿಭಾಗ, ಸುವರ್ಣ ವಿಧಾನ ಸೌಧಕಟ್ಟಡ, ಪೂರ್ವಧ್ವಾರ ಪ್ರವೇಶ, ತಳ ಮಹಡಿ, ಕೊಠಡಿ ಸಂಖ್ಯೆ:ಖಿP-೧೪, ಹಲಗಾ ಬೆಳಗಾವಿ-೫೯೦೦೨೦ ಇವರ ಕಛೇರಿಗೆ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೧-೨೪೭೦೮೭೯ ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ: ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ
ಬೆಳಗಾವಿ,ಮಾ.೨೧(ಕರ್ನಾಟಕ ವಾರ್ತೆ): ೨೦೨೪-೨೫ ನೇ ಸಾಲಿನ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ನಿರುದ್ಯೋಗಿ ಯುವಕ/ಯುವತಿಯರಿಗೆ ವಿವಿಧ ಕೌಶಲ್ಯಭಿವೃದ್ಧಿ (ತಾಂತ್ರಿಕ ನೈಪುಣ್ಯತೆ) ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಗೆ ಆಪ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರದ ಅಧೀನ ಸಂಸ್ಥೆಯಾದ ಕರ್ನಾಟಕ ಜರ್ಮನ ತಾಂತ್ರಿಕ ತರಬೇತಿ ಸಂಸ್ಥೆ ಬೆಂಗಳೂರು ರವರ ಪ್ರಾದೇಶಿಕ ತರಬೇತಿ ಕೇಂದ್ರಗಳ ಸಹಯೋಗದೊಂದಿಗೆ ಜಿಲ್ಲಾ ಮಟ್ಟದಲ್ಲಿಯೇ ತಮ್ಮ ಸುಪರ್ದಿಯಲ್ಲಿ ಸರ್ಕಾರಿ ಸ್ವಾಮ್ಯದ ಸಂಸ್ಥೆಯಾದ ಏಉಖಿಖಿI ಯಿಂದ ನೀಡಲಾಗುವ Self Employed Tailoring, 2) Assistance Beauty Therapist, 3) Domestic Data Entry Operator ತರಬೇತಿ ಎರಡು ತಿಂಗಳ ಅವಧಿಗೆ ಹಾಗೂ ೪) Fashion Designer ತರಬೇತಿಗೆ ಒಂದು ತಿಂಗಳ ಅವಧಿಗೆ ತರಬೇತಿಯನ್ನು ನೀಡಲಾಗುವುದು.
ಅರ್ಹ ಆಭ್ಯರ್ಥಿಗಳು ಅರ್ಜಿಗಳನ್ನು ತಮ್ಮ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಪಡೆದು, ಖುದ್ದಾಗಿ ಭರ್ತಿ ಮಾಡಿ ಸದರಿ ಕಛೇರಿಗೆ ಏಪ್ರಿಲ್ ೩, ೨೦೨೫ ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.