
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ಕೇಂದ್ರ ಸರಕಾರಕ್ಕೆ ಸೂಚನೆ ನೀಡಬೇಕು ಎಂದು ಅರ್ಜಿ ಸಲ್ಲಿಸಿದ ವಕೀಲರೊಬ್ಬರಿಗೆ ಸಿಜೆಐ ರಮಣ ಅವರು ಮಾತಿನ ಛಾಟಿ ಬೀಸಿದ್ದಾರೆ. ಪುಟಿನ್ ಗೆ ಯುದ್ಧ ನಿಲ್ಲಿಸುವಂತೆ ನಾವು ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
ಉಕ್ರೇನ್‌ನಲ್ಲಿ 18 ಸಾವಿರಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಸಿಲುಕಿದ್ದು ಅವರನ್ನು ಸುರಕ್ಷಿತವಾಗಿ ವಾಪಸ್ ಕರೆತರುವ ಕಾರ್ಯಾಚರಣೆ ಕೇಂದ್ರ ಸರಕಾರದಿಂದ ನಡೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರಕ್ಕೆ ಸೂಚನೆ ನೀಡಬೇಕು ಎಂದು ವಕೀಲರು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಚೀಫ್ ಜಸ್ಟೀಸ್ ಆಫ್ ಇಂಡಿಯಾ ಎನ್. ವಿ. ರಮಣ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿದ ಬಳಿಕ, ಕೇಂದ್ರ ಸರಕಾರ ವಿದ್ಯಾರ್ಥಿಗಳನ್ನು ವಾಪಸ್ ಕರೆತರಲು ಪ್ರಯತ್ನ ನಡೆಸುತ್ತಿದೆ. ಇನ್ನೂ ಸುರಕ್ಷಿತವಾಗಿ ಕರೆತರುವುದಾದರೆ ಯುದ್ಧವೇ ನಿಲ್ಲಬೇಕು. ಆದರೆ ಪುಟಿನ್‌ಗೆ ಯುದ್ಧ ನಿಲ್ಲಿಸುವಂತೆ ನಾವು ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
ಬಳಿಕ ಅವರು ಅಟಾರ್ನಿ ಜನರಲ್ ಕೆ. ಕೆ. ವೇಣುಗೋಪಾಲ್ ಅವರಿಗೆ ವಿದ್ಯಾರ್ಥಿಗಳನ್ನು ವಾಪಸ್ ಕರೆತರುವ ನಿಟ್ಟಿನಲ್ಲಿ ನ್ಯಾಯಾಂಗದ ವತಿಯಿಂದ ಸಹಾಯ ಒದಗಿಸುವಂತೆ ಹೇಳಿದ್ದಾರೆ. ಸೂಚನೆಗೆ ಪ್ರತಿಕ್ರಿಯೆ ನೀಡಿದ ಅಟಾರ್ನಿ ಜನರಲ್, ಕೇಂದ್ರ ಸರಕಾರ ಈ ನಿಟ್ಟಿನಲ್ಲಿ ಈಗಾಗಲೇ ಕೆಲ ಸಚಿವರನ್ನು ನಿಯೋಜನೆ ಮಾಡಿದೆ ಎಂದು ಮಾಹಿತಿ ನೀಡಿದ್ದಾರೆ.
ಉಕ್ರೇನ್: ಸಂಕಷ್ಟಕ್ಕೆ ಸಿಲುಕಿದ ವಿದ್ಯಾರ್ಥಿಗಳಿಗೆ CM ದೂರವಾಣಿ ಕರೆ ; ಹೇಳಿದ್ದೇನು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ