Latest

ದೂರದ ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡ ಡಿಂಡಿಮ; ಕನ್ನಡದಲ್ಲಿಯೇ ಭಾಷಣ ಮಾಡಿ ಗಮನ ಸೆಳೆದ ಸಂಸದ ಚಂದ್ರ ಆರ್ಯ

 

ಪ್ರಗತಿವಾಹಿನಿ ಸುದ್ದಿ; ಕೆನಡಾ: ಕರ್ನಾಟಕದಲ್ಲಿ ಕನ್ನಡ ಭಾಷೆ ಕಡಿಗಣಿಸಲಾಗುತ್ತಿದೆ, ಕನ್ನಡದ ಅಸ್ಮಿತತೆ ವಿಚಾರ, ಹಿಂದಿ ಹೇರಿಕೆಯಂತಹ ವಿಷಯಗಳು ಭಾರಿ ಚರ್ಚೆಯಲ್ಲಿರುವ ಸಂದರ್ಭದಲ್ಲಿಯೇ ದೂರದ ಕೆನಡಾದ ಪಾರ್ಲಿಮೆಂಟ್ ನಲ್ಲಿ ಕನ್ನಡ ಕಹಳೆ ಮೊಳಗಿರುವುದು ಹೆಮ್ಮೆಯ ವಿಚಾರ.

ಹೌದು. ಕೆನಡಾ ಸಂಸತ್ ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡುವ ಮೂಲಕ ವಿದೇಶಿ ಸಂಸತ್ ನಲ್ಲಿ ಮೊದಲ ಬಾರಿಗೆ ಕನ್ನಡ ಡಿಂಡಿಮ ಭಾರಿಸಿದ್ದಾರೆ. ನನ್ನ ಮಾತೃಭಾಷೆ ಕನ್ನಡ. ಹಾಗಾಗಿ ನಾನು ಕನ್ನಡದಲ್ಲಿಯೇ ಮಾತನಾಡುತ್ತೇನೆ. ಈ ಸುಂದರ ಭಾಷೆಗೆ ಸುದೀರ್ಘ ಇತಿಹಾಸವಿದೆ. ಕನ್ನಡ ಭಾಷೆಯನ್ನು 5 ಕೋಟಿ ಜನರು ಮಾತನಾಡುತ್ತಾರೆ ಎಂದು ಸಂಸದ ಚಂದ್ರ ಆರ್ಯ ತಿಳಿಸಿದ್ದಾರೆ.

ಕುವೆಂಪು ರಚನೆಯ ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು….ಎಂಬ ಗೀತೆಯ ಸಾಲುಗಳನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸುವ ಮೂಲಕ ಕೆನಡಾ ಸಂಸತ್ ನಲ್ಲಿ ಮಾತು ಮುಗಿಸಿದ್ದು ಎಲ್ಲರ ಗಮನ ಸೆಳೆಯಿತು.

ಮೂಲತ: ತುಮಕೂರು ಜಿಲ್ಲೆ ಶಿರಾ ತಾಲೂಕಿನ ದ್ವಾರಾಳು ಗ್ರಾಮದವರಾದ ಚಂದ್ರ ಆರ್ಯ, ಕೆನಡಾದ ಲಿಬರಲ್ ರಾಜಕಾರಣಿ. 2015ರ ಫೆಡರಲ್ ಚುನಾವಣೆಯಲ್ಲಿ ಕೆನಡಾ ಹೌಸ್ ಆಫ್ ಕಾಮನ್ಸ್ ನಲ್ಲಿ ನೇಪಿಯನ್ ಆಗಿ ಆಯ್ಕೆಯಾದರು. ಬಳಿಕ 2019ರಲ್ಲಿ ಫೆಡರಲ್ ಚುನಾವಣೆಯಲ್ಲಿ ಮರು ಆಯ್ಕೆಯಾದರು. ಪ್ರಸ್ತುತ ಅಂತರಾಷ್ಟ್ರೀಯ ವ್ಯಾಪಾರದ ಸ್ಥಾಯಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಕರೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button