Latest

ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿದ್ದು, ಹಲವೆಡೆ ಆಲಿಕಲ್ಲು, ಗುಡುಗು ಸಹಿತ ಮಳೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆರಾತ್ರಿ ಭಾರಿ ಮಳೆಯಾಗಿದ್ದು, ಬಿಸಿಲ ಝಳದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿಗೆ ವರುಣ ತಂಪೆರೆದಿದ್ದಾನೆ.

ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

Related Articles

Back to top button