Belagavi NewsBelgaum NewsKannada NewsKarnataka NewsPolitics

*ನಾಡದ್ರೋಹಿ ನಗರ ಸೇವಕರ ಸದಸ್ಯತ್ವವನ್ನು ರದ್ದು ಮಾಡಿ: ಡಿಸಿಗೆ ಕರವೇ ಒತ್ತಾಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಾಡದ್ರೋಹಿ ಧೋರಣೆ ತೋರಿದ ಮೂವರು ನಗರ ಸೇವಕರ ಸದಸ್ಯತ್ವವನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು.‌

ಇಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೋಹಮ್ಮದ ರೋಷನ್ ಗೆ ಮನವಿ ಸಲ್ಲಿಸಲಾಯಿತು.

ಪಾಲಿಕೆಯಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಬಾರದು ಎಂದು ಪುಂಡಾಟಿಕೆ ಪ್ರದರ್ಶಿಸಿ ನಾಡವಿರೋಧಿ ಚಟುವಟಿಕೆ ನಡೆಸುತ್ತಿರುವ ಎಂ.ಇ.ಎಸ್. ನಗರ ಸೇವಕರಾದ ರವಿ ಸಾಳುಂಕೆ, ಶಿವಾಜಿ ಮಂಡೋಳಕರ, ವೈಶಾಲಿ ಭಾತಕಾಂಡೆ ಈ ಮೂವರ ಸದಸ್ಯತ್ವವನ್ನು ಕೂಡಲೇ ರದ್ದು ಮಾಡಿ ಸರ್ಕಾರ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು. ಈ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ಮಾಡಿದರೆ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ, ರಾಜ್ಯದಲ್ಲಿ ಕನ್ನಡ ಕಡ್ಡಾಯವಾಗಿದೆ. ಆಡಳಿತ ಭಾಷೆ ಕನ್ನಡವಾಗಿದೆ. ಈ ಕುರಿತು ಸರ್ಕಾರವು ಅನೇಕ ಆದೇಶಗಳನ್ನು ಹಾಗೂ ಸುತ್ತೋಲೆಗಳನ್ನು ಹೊರಡಿಸಿದೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸರ್ಕಾರದ ಆದೇಶದಂತೆ ಅಧಿಕಾರಿಗಳು ಕನ್ನಡವನ್ನು ಕಡ್ಡಾಯಗೊಳಿಸುತ್ತಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಕನ್ನಡವನ್ನು ಕಡ್ಡಾಯಗೊಳಿಸದಂತೆ ಮೊಂಡುವಾದ ಮಾಡಿ ಮರಾಠಿ ಭಾಷೆಯಲ್ಲಿ ಪತ್ರ ವ್ಯವಹಾರ ಮಾಡಬೇಕು, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮರಾಠಿ ಫಲಕಗಳನ್ನು ಹಾಕಬೇಕು ಎಂದು ಒತ್ತಾಯಿಸಿದರು. 

Home add -Advt

Related Articles

Back to top button