Latest

ಮಹಿಳಾ ಐಪಿಎಸ್ ಅಧಿಕಾರಿಗೆ ಪತಿಯಿಂದ ವರದಕ್ಷಿಣೆ ಕಿರುಕುಳ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಿರಿಯ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ಪತಿ ಮತ್ತು ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ನೀಡುತ್ತಿರುವ ಬಗ್ಗೆ ಆರೋಪಿಸಿದ್ದು, ಈ ಬಗ್ಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ತಮ್ಮ ಪತಿ ಐಎಫ್ಎಸ್ ಅಧಿಕಾರಿ ನಿತಿನ್ ಸುಭಾಷ್ ಯೆಲೋ ವಿರುದ್ಧ ದೂರು ದಾಖಲಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆಯಲ್ಲಿ 7 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

2011ರಲ್ಲಿ ವರ್ತಿ ಹಾಗೂ ನಿತಿನ್ ವಿವಾಹವಾಗಿತ್ತು. ಪತಿ ಹಾಗೂ ಕುಟುಂಬದವರು ವರದಕ್ಷಿಣೆಗಾಗಿ ತನಗೆ ಹಿಂಸೆ ನೀಡುತ್ತಿದ್ದು, ದೈಹಿಕವಾಗಿ ದೌರ್ಜನ್ಯವೆಸಗಿದ್ದಾರೆ ಎಂದು ತಮ್ಮ ದೂರಿನಲ್ಲಿ ಹೇಳಿದ್ದಾರೆ. ವರದಕ್ಷಿಣೆ ನೀಡದಿದ್ದರೆ ವಿಚ್ಛೇದನದ ಬೆದರಿಕೆಯನ್ನೂ ಒಡ್ಡುತ್ತಿರುವುದಾಗಿ ವರ್ತಿಕಾ ಉಲ್ಲೇಖಿಸಿದ್ದಾರೆ.

Related Articles

Back to top button