Kannada NewsKarnataka NewsLatest

*ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ದಿಢೀರ್ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಸೇರಿದಂತೆ 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಆದೇಶ ಹೊರಡಿಸಿದ್ದು, ಜೂನ್ 1ರಿಂದ ಹೊಸ ಕಾರ್ಯಾಭಾರ ವಹಿಸಿಕೊಳ್ಳಲು ಸೂಚಿಸಲಾಗಿದೆ.

Home add -Advt

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್ ಅವರನ್ನು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಸಂತೋಷ್ ಗಜಾನನ ಭಟ್ ಅವರಿಂದ ತೆರವಾದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಆಗಿ ಕೆ.ಬಿ.ಶಿವಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.

Related Articles

Back to top button