*ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸಾವು*
ಪ್ರಗತಿವಾಹಿನಿ ಸುದ್ದಿ: ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿ ಹೋಗುತ್ತಿದ್ದ ಮೂವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಸೀಮಿಕೇರಿ ಬೈಪಾಸ್ ನಲ್ಲಿ ಈ ಅಪಘಾತ ಸಂಭವಿಸಿದೆ. ಮೃತ ಮೂವರು ಬಾಲಕರು ಎಂದು ತಿಳಿದುಬಂದಿದೆ. ಗದ್ದನಕೇರಿ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಬೈಕ್ ತೆರಳುತ್ತಿತ್ತು. ಈ ವೇಳೆ ಕ್ಯಾಂಟರ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕಲಾದಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Home add -Advt BREAKING NEWS: ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನ: ಐವರು … Continue reading *ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸಾವು*
Copy and paste this URL into your WordPress site to embed
Copy and paste this code into your site to embed