Latest

*ಮತ್ತೊಂದು ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಸತ್ಯನಾರಾಯಣ (50), ನಾಗರತ್ನ (45), ಸಾಗರ್ (25) ಹಾಗೂ ರಾಜಣ್ಣ (25) ಎಂದು ಗುರುತಿಸಲಾಗಿದೆ. ಕೊಂಡ್ಲಿ ಕ್ರಾಸ್ ಬಳಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Home add -Advt

ಮೃತರೆಲ್ಲರೂ ಚಿಕ್ಕನಾಯಕನಹಳ್ಳಿಯ ನಡುವಿನಹಳ್ಳಿಯವರು ಎಂದು ತಿಳಿದುಬಂದಿದೆ. ಗುಬ್ಬಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

*ಭೀಕರ ಅಪಘಾತ: ಖ್ಯಾತ ಯಕ್ಷಗಾನ ಭಾಗವತ ತಿಮ್ಮಪ್ಪ ಹೆಗಡೆ ದುರ್ಮರಣ*

https://pragati.taskdun.com/yakshagana-bhagavatatimmappa-hegadedeathaacident/

Related Articles

Back to top button