Latest

*ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ವೈದ್ಯ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ವೇಗವಾಗಿ ಬಂದ ಕಾರು ಚಾಲಕ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವೈದ್ಯರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೋಲಾರ-ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿ ಹಾದುಹೋಗುವ ಚೆನ್ನೈ-ಬೆಂಗಳುರು ಎಕ್ಸ್ ಪ್ರೆಸ್ ಕಾರಿಡಾರ್ ಹೈವೇಯಲ್ಲಿ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ ವೈದ್ಯ ಕೃಷ್ಣ ಜಗನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅನಂತಪುರಂ ನಿಂದ ಕುಪ್ಪ ಪಿಇಎಸ್ ಕಾಲೇಜಿಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬಂಗಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button