Kannada NewsKarnataka NewsLatest

*ಮರಕ್ಕೆ ಡಿಕ್ಕಿ ಹೊಡೆದ ಕಾರು: ಸ್ಥಳದಲ್ಲೇ ಇಬ್ಬರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಇಲ್ಲಿನ ಗೌರಿಬಿದನೂರು ತಾಕೂಕಿನ ತಿಪ್ಪಗಾನಹಳ್ಳಿ ಬಳಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗೌರಿಬಿದನೂರಿನ ಕಡೆಯಿಂದ ಬೆಂಗಳೂರು ಕಡೆಗೆ ಕಾರು ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಮಂಚೇನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button