Kannada NewsKarnataka NewsLatest
*ರಸ್ತೆ ಬದಿ ಕಲ್ಲಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು: ಮಹಿಳೆ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ; ರಸ್ತೆ ಬದಿ ಕಲ್ಲಿಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಯಚೂರು ಜಿಲ್ಲೆಯ ಮನ್ಸಲಾಪುರದ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಉಡುಪಿಯಿಂದ ಕಾರಿನಲ್ಲಿ ಹೈದರಾಬಾದ್ ಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅತಿ ವೇಗದಿಂದಾಗಿ ಕಾರು ನಿಯಂತ್ರಣ ತಪ್ಪಿ ದುರಂತ ಸಂಭವಿಸಿದೆ.
ಹಾಜಿರಾ (65) ಮೃತ ದುರ್ದೈವಿ. ಇಶಾನ್ ಅಬ್ದುಲ್, ಇಲಾನ್ ಇಸ್ಮಾಯಿಲ್, ಮೊಹಮ್ಮದ್ ಇಜಾನ್, ಮೊಹಮ್ಮದ್ ಇಮ್ರಾನ್ ಗಾಯಗೊಂಡಿದ್ದಾರೆ. ಎಲ್ಲರೂ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೆಶ್ವರ ನಿವಾಸಿಗಳು ಎಂದು ತಿಳಿದುಬಂದಿದೆ.