Kannada NewsKarnataka NewsLatest

*ರಸ್ತೆಬದಿ ನಿಂತಿದ್ದವರಿಗೆ ಗುದ್ದಿದ ಕಾರು; ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಡ್ಕಾರು ಎಂಬಲ್ಲಿ ನಡೆದಿದೆ.

ಕಾರ್ಮಿಕರಾದ ಚಂದ್ರಪ್ಪ, ರೇಗಪ್ಪ, ಮಾಂತೇಶ್ ಮೃತರು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳು ಎಂದು ತಿಳಿದುಬಂದಿದೆ. ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಕಾರ್ಮಿಕರಿಗೆ ಡಿಕ್ಕಿಹೊಡೆದ ಕಾರು ಬಳಿಕ ಲಾರಿಗೂ ಗುದ್ದಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button