Karnataka News

*ಭೀಕರ ಅಪಘಾತ; ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ*

ಮದುವೆ ಆಮಂತ್ರ ನೀಡಲು ಹೊರಟಿದ್ದ ವೇಳೆ ದುರಂತ


ಪ್ರಗತಿವಾಹಿನಿ ಸುದ್ದಿ: ಕಾರು ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಹೊರವಲಯದಲ್ಲಿ ನಡೆದಿದೆ.

Home add -Advt

ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್, ಕೋಲಾರದ ನಿಶ್ಚಲ್ ಮೃತ ದುರ್ದೈವಿಗಳು. ಅಪಘಾತದಲ್ಲಿ ಓರ್ವ ಬಚಾವ್ ಆಗಿದ್ದು, ಬಂಗಾರಪೇಟೆಯ ಸಾಯಿ ಗಗನ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮೃತಪಟ್ಟಿರುವ ಮೂವರು ರೇವಾ ಯುನಿವರ್ಸಿಟಿ ವಿದ್ಯಾರ್ಥಿಗಳು. ಅಪಘಾತದ ರಭಸಕ್ಕೆ ಆಡಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸಾಯಿ ಗಗನ್ ಸಹೋದರಿಯ ಮದುವೆಯ ಆಮಂತ್ರಣ ಪತ್ರಿಕೆ ಹಂಚಲು ಸ್ನೇಹಿತರೆಲ್ಲರೂ ಕಾರಿನಲ್ಲಿ ಹೊರಟಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

Related Articles

Back to top button