
ಪ್ರಗತಿವಾಹಿನಿ ಸುದ್ದಿ: ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಯೂಟ್ಯೂಬರ್ಸ್ ಸ್ಥಳದಲ್ಲೇ ಸಾವನ್ನಪ್ಪಿರ್ವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ದಲ್ಲಿ ನಡೆದಿದೆ.
ಅಪಘಾತದಲ್ಲಿ 6 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಲಕ್ಕಿ, ಸಲ್ಮಾನ್, ಶಾರುಖ್, ಶಹ್ನವಾಜ್ ಎಂದು ಗುರುತಿಸಲಾಗಿದೆ.
ಮ್ರಿತ ನಾಲ್ವರು ಯುವಕರು ಯೂಟ್ಯೂಬ್ ಚಾನಲ್ ನಡೆಸುತ್ತಿದ್ದರು. ಕಾಮಿಡಿ ಕಂಟೆಂಟ್ ಮೂಲಕ ನಕ್ಕು ನಗಿಸುತ್ತಿದ್ದರು. ಹುಟ್ಟು ಹಬ್ಬ ಆಚರಣೆಗೆಂದು ಮನೆಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ನಾಲ್ವರು ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ