*ಏರ್ ಪೋರ್ಟ್ ನಿಂದ ವಾಪಸ್ ಆಗುವಾಗ ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವೇಗವಾಗಿ ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದ್ದು, ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಕ್ರಾಸ್ ಬಳಿ ನಡೆದಿದೆ.

ಆಂಧ್ರಪ್ರದೇಶ ಮೂಲದ 55 ವರ್ಷದ ಶಫಿ ಹಾಗೂ 50 ವರ್ಷದ ಶಮಾ ಮೃತ ದಂಪತಿ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಗಳನ್ನು ಬಿಟ್ಟು ವಾಪಸ್ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿದ್ದ ಹಳ್ಳಕ್ಕೆ ಬಿದ್ದಿದೆ.

Home add -Advt

ದಂಪತಿಗಳು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಗೌನಪಲ್ಲಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

Related Articles

Back to top button