
ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಮರಕ್ಕೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ ತರಿಕೆರೆ ತಾಲೂಕಿನ ಬೆಟ್ಟದಾತಾವರಕೆರೆ ಗ್ರಾಮದಲ್ಲಿ ನಡೆದಿದೆ.
ಮೃತ ದಂಪತಿಯನ್ನು ಶ್ರೀನಿವಾಸ್ ಹಾಗೂ ಶ್ವೇತಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಕ್ಕಳೊಂದಿಗೆ ದಂಪತಿ ಬೆಂಗಳೂರಿನಿಂದ ಭದ್ರಾವತಿಗೆ ಸಂಬಂಧಿಕರ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರು ಅಪಘಾತಕ್ಕೀಡಾಗಿ ದುರಂತ ಸಂಭವಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ