Karnataka News

*ಭೀಕರ ಅಪಘಾತ: ಯುವ ಪತ್ರಕರ್ತ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ಯುವ ಪತ್ರಕರ್ತರೊಬ್ಬರು ಸಾವನ್ನಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಜಿ ಎಸ್ ಭರತ್ ಮೃತ ಪತ್ರಕರ್ತ (34) ಚಿಕ್ಕಬಳ್ಳಾಪುರದ ಗುಡಿಬಂಡೆ ತಾಲೂಕಿನ ಮಾಚಹಳ್ಳಿಯ ಕೆರೆ ಕಟ್ಟೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪತ್ರಕರ್ತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರರಾಗಿ ಜಿ ಎಸ್ ಭರತ್ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತದ ವೇಳೆ ಕಾರಿನಲ್ಲಿನ ಏರ್ ಬ್ಯಾಗ್ ಓಪನ್ ಆಗಿದ್ದರೂ ಭರತ್ ಉಳಿದಿಲ್ಲ.

ಬೆಂಗಳೂರಿನಲ್ಲಿ ವಾಸವಿದ್ದ ಗುಡಿಬಂಡೆ ಪಟ್ಟಣದ ಮೂಲದ ಜಿ ಎಸ್ ಭರತ್, ಗುಡಿಬಂಡೆ ಪಟ್ಟಣದಿಂದ ಬಾಗೇಪಲ್ಲಿ ಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರದ ಗುಡಿಬಂಡೆಯ ಅವರ ಮನೆಯಿಂದ ಬಾಗೇಪಲ್ಲಿ -ಗುಡಿಬಂಡೆ ಮಾರ್ಗವಾಗಿ ಕಾರಿನಲ್ಲಿ ಬರುತ್ತಿದ್ದಾಗ ಮಾಚಹಳ್ಳಿ ಎಂಬಲ್ಲಿ ಕಾರು ನಿಯಂತ್ರಣ ತಪ್ಪಿ ಗಂಗಮ್ಮನ ಗುಡಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಭರತ್ ತಲೆಗೆ ಗಂಭೀರ ಗಾಯವಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಭರತ್ ಅವರು, ಉದಯಕಾಲ ಸೇರಿ ಹಲವು ಪತ್ರಿಕೆಗಳಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು. ಕಳೆದ 2 ವರ್ಷಗಳಿಂದ ಹೊಸ ದಿಗಂತ ಪತ್ರಿಕೆಯಲ್ಲಿ ಬೆಂಗಳೂರಿನಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ, 9 ತಿಂಗಳ ಮಗು, ತಂದೆ, ತಾಯಿ, ಓರ್ವ ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button