*ಮರಕ್ಕೆ ಕಾರು ಡಿಕ್ಕಿ: ಓರ್ವ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮರಕ್ಕೆ ಕಾರು ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಸುಶೀಲ್ ಕುಮಾರ್ ದೇಶಪಾಂಡೆ (33) ಮೃತ ದುರ್ದೈವಿ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡದಿಂದ ಕಾರವಾರಕ್ಕೆ ಸ್ನೇಹಿತರ ಮದುವೆಗೆ ಹೋಗಿ ವಾಪಾಸ್ ಆಗುವಾಗ ಈ ದುರಂತ ಸಂಭವಿಸಿದೆ. ಕಲಘಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.