Kannada NewsKarnataka NewsLatest

*ನಾಲೆಗೆ ಉರುಳಿ ಬಿದ್ದ ಕಾರು; ನಾಲ್ವರು ಮಹಿಳೆಯರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಮಂಡ್ಯ; ನಾಲೆಗೆ ಕಾರು ಉರುಳಿ ಬಿದ್ದು ನಾಲ್ವರು ಮೃತಪಟ್ಟಿರಿವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿಯಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ತುರುಗನೂರು ನಾಲೆಗೆ ಬಿದ್ದಿದೆ. ಕಾರಿನಲ್ಲಿದ್ದ ಐವರಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ.

ಮೃತರನ್ನು ಮಹದೇವಮ್ಮ, ರೇಖಾ, ಸಂಜನಾ, ಮಹಾದೇವಿ ಎಂದು ಗುರುತಿಸಲಾಗಿದೆ. ಕಾರು ತಿರುವಿನಲ್ಲಿ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದು ಬಳಿಕ ನಾಲೆಗೆ ಉರುಳಿ ಬಿದ್ದಿದೆ.

ಕಾರಿನ ಚಾಲಕ ಮನೋಜ್ ಈಜಿ ದಡ ಸೇರಿದ್ದಾನೆ. ಉಳಿದ ನಾಲ್ವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button