
ಪ್ರಗತಿವಾಹಿನಿ ಸುದ್ದಿ: ಭೀಕರ ಅಪಘಾತದಲ್ಲಿ ಡಿಎಆರ್ ಪೊಲೀಸ್ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನ್ಯಾಮತಿ ಬಳಿಯ ದಾನಿಹಳ್ಳಿಯಲ್ಲಿ ನಡೆದಿದೆ.
34 ವರ್ಷದ ಸಿದ್ದೇಶ್ ಮೃತರು. ದಾವಣಗೆರೆಯ ಡಿಎಆರ್ ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕಾರು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ.
ದಾವಣಗೆರೆಯಿಂದ ಮಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಾಲಕ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಸಿದ್ದೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ