
ಪ್ರಗತಿವಾಹಿನಿ ಸುದ್ದಿ: ಕಾರು ಅಪಘಾತದಲ್ಲಿ ಶ್ರೀಲಂಕಾ ಸಚಿವರೊಬ್ಬರು ಸಾವನ್ನಪ್ಪಿರುವ ಘಟನೆ ಕೊಲಂಬೊದಲ್ಲಿ ನಡೆದಿದೆ.
ಶ್ರೀಲಂಕಾ ಜಲಸಂಪನ್ಮೂಲ ಸಚಿವ ಸನತ್ ನಿಶಾಂತ್ (48) ಹಾಗೂ ಅವರ ಭದ್ರತಾ ಸಿಬ್ಬಂದಿ, ಕಾರು ಚಾಲಕ ಕೂಡ ಸಾವನ್ನಪ್ಪಿದ್ದಾರೆ.
ಇಂದು ಮುಂಜಾನೆ ಶ್ರೀಲಂಕಾ ರಾಜಧಾನಿ ಕೊಲಂಬೊ ಎಕ್ಸ್ ಪ್ರೆಸ್ ವೇನಲ್ಲಿ ಸಚಿವರು ಪ್ರಯಾಣಿಸುತ್ತಿದ್ದ ಕಾರು ಕಂಟೈನರ್ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸಚಿವ ಸನತ್ ನಿಶಾಂತ್ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ