Latest

*ಹುಟ್ಟು ಹಬ್ಬದಂದೇ ಲಾಂಗ್ ಡ್ರೈವ್ ಗೆಂದು ಹೋದವರು ಭೀಕರ ಅಪಘಾತಕ್ಕೆ ಬಲಿ*

ಪ್ರಗತಿವಾಹಿನಿ ಸುದ್ದಿ: ಹುಟ್ಟುಹಬ್ಬ ಆಚರಣೆ ಮಾಡಲೆಂದು ಇಬ್ಬರು ಯುವಕರು ಕಾರಿನಲ್ಲಿ ಲಾಂಗ್ ಡ್ರೈವ್ ಹೊರಟಿದ್ದು, ಈ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ.

ಬೆಂಗಳೂರಿನ ಕೆಂಪಾಪುರ ಮೂಲದ 17 ವರ್ಷದ ಸಿದ್ಧಾರ್ಥ್ ಹಾಗೂ 18 ವರ್ಷದ ಹರ್ಷ ಮೃತ ಯುವಕರು. ಇಬ್ಬರೂ ಕಾರಿನಲ್ಲಿ ಲಾಂಗ್ ಡ್ರೈವ್ ಹೋಗಿದ್ದಾರೆ. ಹೊಸಕೋಟೆ ಹೊರವಲಯದಲ್ಲಿ ಕಾರು ನಿಲ್ಲಿಸಿದ್ದರು.

ಈ ವೇಳೆ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಕಾರಿಗೆ ಡಿಕ್ಕಿ ಹೊಡೆದುಕೊಂಡು ಹೋಗಿದೆ. ಯುವಕರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಿಟ್ ಆಂಡ್ ರನ್ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪರಿಚಿತ ವಾಹನಕ್ಕಾಗಿ ಹುಡುಕಾಟ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button