
ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಅಣ್ಣ-ತಂಗಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ಈ ದುರಂತ ಸಂಭವಿಸಿದೆ. ಮೃತರನ್ನು ತಳಕು ಗ್ರಾಮದ ಅಭಿ (48) ಹಾಗೂ ತಂಗಿ ಮಂಜುಳಾ (25) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ರಾಯಚೂರು ಮೂಲದ ಕಾರು ಚಾಲಕ ಗಾಯಗೊಂಡಿದ್ದಾರೆ. ಅವರನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.