Kannada NewsLatestWorld

*ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಲ್ಲಿದ್ದಲು ಗಣಿ ಸ್ಫೋಟಗೊಂಡು 82 ಜನರು ಸಾವನ್ನಪ್ಪಿರುವ ಘೋರ ಘಟನೆ ಚೀನಾದಲ್ಲಿ ನಡೆದಿದೆ.

ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಈ ದುರಂತ ಸಂಭವಿಸಿದೆ. ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ82 ಜನರು ಸಾವನ್ನಪ್ಪಿದ್ದಾರೆ. 9 ಜನರು ನಾಪತ್ತೆಯಾಗಿದ್ದಾರೆ.

ಶುಕ್ರವಾರ ಸಂಜೆ ಈ ಘಟನೆ ಸಂಭವಿದ್ಸಿದ್ದು, ಒಟ್ಟು 247 ಕಾರ್ಮಿಕರು ನೆಲದಡಿಯಿದ್ದರು. ಅವರಲ್ಲಿ ಹೆಚ್ಚಿನವರನ್ನು ಶನಿವಾರ ಬೆಳಗ್ಗೆ ಮೇಲ್ಮೈಗೆ ತರಲಾಗಿದೆ. ನಾಪತ್ತೆಯಾಗಿರುವವರಿಗಾಗಿ ರಕ್ಷಣಾ ಸಿಬ್ಬಂದಿ ತೀವ್ರ ಹುಡುಕಾಟ ನಡೆಸಿದ್ದಾರೆ.

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಸೂಚಿಸಿದ್ದಾರೆ. ಇತ್ತೀಚೆಗೆ ಚೀನಾದಲ್ಲಿ ಸಂಭವಿಸಿದ ಅತಿದೊಡ್ದ ದುರಂತ ಇದಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button