
ಪ್ರಗತಿವಾಹಿನಿ ಸುದ್ದಿ : ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಕಾರು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.
ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸುಟ್ಟು ಕರಕಲಾಗಿದ್ದಾರೆ. ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ಬೆಳಗ್ಗೆ ದುರ್ಘಟನೆ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಸುಟ್ಟು ಹೋಗಿದ್ದು, ಉಳಿದ ಮೂವರು ಅದೃಷ್ಟವಶಾತ್ ಬಚಾವಾಗಿದ್ದಾರೆ.
ಖಾಸಗಿ ಬಸ್ ನಲ್ಲಿದ್ದ ಪ್ರಯಾಣಿಕರು ಬಚಾವಾಗಿದ್ದು ಕೆಲವರಿಗೆ ಗಾಯಗಳಾಗಿದೆ ಎಂದು ವರದಿಯಾಗಿದೆ. ಸ್ಥಳಕ್ಕೆ ಗ್ರಾಮಾಂತರ ಹಾಗೂ ಕೆಂಚಾರ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಕಾರು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ