Belagavi NewsBelgaum NewsCrimeKannada NewsKarnataka NewsNational
*ಬೆಳಗಾವಿಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು*; *ಕ್ಷಣಾರ್ಧದಲ್ಲಿ ಸುಟ್ಟು ಭಸ್ಮ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿಲ್ಲಿಸಿದ್ದ ಕಾರೊಂದಕ್ಕೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ನಡೆದಿದೆ.
ಊರಿಗೆ ತೆರಳಿ ವಾಪಸ್ ಬಂದಿದ್ದ ಚಾಲಕ ಕಾರನ್ನು ನಿಲ್ಲಿಸಿ ಕೆಳಗಿಳಿದ ಕೆಲವೇ ಕ್ಷಣಗಳಲ್ಲಿ ಈ ಅವಘಡ ಸಂಭವಿಸಿದೆ. ಕಾರಿನಿಂದ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿ ಧಗಧಗನೆ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಕಾರನ್ನು ಆವರಿಸಿಕೊಂಡಿದ್ದು, ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಆದರೆ ಅಷ್ಟರಲ್ಲಾಗಲೇ ಕಾರು ಸಂಪೂರ್ಣ ಸುಟ್ಟುಹೋಗಿತ್ತು.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿಗೆ ಬೆಂಕಿ ತಗುಲಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



