Kannada NewsKarnataka NewsLatest

*ಲಾರಿಗೆ ಕಾರು ಡಿಕ್ಕಿ: ಇಬ್ಬರ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಿಂದ ಬಳ್ಳಾರಿ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಲಾರಿಗೆ ಕಾರು ಡಿಕ್ಕಿಯಾಗಿರುವ ಘಟನೆ ನಡೆದಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ದುರ್ಮರಣ ಹೊಂದಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಕೂರು ತಾಲ್ಲೂಕಿನ ರಾಜಾಪುರ ಸಮೀಪ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಮೂಲದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು ಬೆಂಗಳೂರು ಮೂಲದ ರವಿಚಂದ್ರ (40) ಮತ್ತು ಸಂತೋಷ್ (25) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಬಳ್ಳಾರಿ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅದೇ ಸಮಯದಲ್ಲಿ ಬಳ್ಳಾರಿಯಿಂದ ಚಳ್ಳಕೆರೆ ಕಡೆಗೆ ಬರುತ್ತಿದ್ದ ಲಾರಿಗೆ ಇವರ ಕಾರು ಡಿಕ್ಕಿ ಹೊಡೆದಿದೆ.

ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದವರು ಸ್ಥಳದಲ್ಲೇ ಮೃತಪಟ್ಟಿದ್ದು ಅಪಘಾತದ ತೀವ್ರತೆಗೆ ವಾಹನಗಳು ಅಕ್ಷರಶಃ ನುಜ್ಜುಗುಜ್ಜಾಗಿವೆ.

Home add -Advt

ಸದ್ಯ ಘಟನಾ ಸ್ಥಳಕ್ಕೆ ರಾಂಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. 

Related Articles

Back to top button