Kannada NewsKarnataka NewsLatest
*ಡಿವೈಡರ್ ಗೆ ಡಿಕ್ಕಿ ಹೊಡೆದು ಎರಡು ವಾಹನಗಳಿಗೆ ಗುದ್ದಿದ ಕಾರ್: ಇಬ್ಬರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಡಿವೈಡರ್ ಗೆ ಕಾರ್ ಒಂದು ಡಿಕ್ಕಿ ಹೊಡೆದು ಎದುರಿನಿಂದ ಬರುತ್ತಿದ್ದ ಎರಡು ಕಾರ್ ಗಳಿಗೆ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಈ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ನಿಡಘಟ್ಟ ಸಮೀಪದಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ.
ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗೆ ಕೊಂಡೊಯ್ಯಲಾಗಿದೆ.
ಮದ್ದೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.