Latest

ಕಾರು ಮರಕ್ಕೆ ಡಿಕ್ಕಿ; ಇಬ್ಬರ ಸಾವು, ಮೂವರಿಗೆ ಗಂಭೀರ ಗಾಯ

ಪ್ರಗತಿವಾಹಿನಿ ಸುದ್ದಿ, ಮುಂಡಗೋಡ: ಶಿರಸಿ- ಹುಬ್ಬಳ್ಳಿ ರಾಜ್ಯ ಹೆದ್ದಾರಿಯ ಪಾಳಾ ಕ್ರಾಸ್ ಬಳಿ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು ಮೂವರು ಗಂಭೀರ ಗಾಯಗೊಂಡಿದ್ದಾರೆ.

ಪಟ್ಟಣದ ಬಸವನಬೀದಿಯ ಗಣೇಶ ಗಾಣಿಗೇರ ಹಾಗೂ ಮಹೇಶ ಗಾಣಿಗೇರ ಮೃತಪಟ್ಟವರು. ಪಾಳಾ ಗ್ರಾಮದಲ್ಲಿ ನಡೆಯುತ್ತಿದ್ದ ಶ್ರೀ ಮಾರಿಕಾಂಬಾ ದೇವಿ ಜಾತ್ರಾಮಹೋತ್ಸವದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಗಾಯಗೊಂಡ ಮೂವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆದಿದೆ.

https://pragati.taskdun.com/100-crore-will-be-released-in-a-week-for-women-empowerment-cm-basavaraja-bommai/
https://pragati.taskdun.com/t-sunandamma-award-for-literature-bhuvaneshwari-hegade/
https://pragati.taskdun.com/actor-director-satish-kaushik-passes-away/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button