ಪ್ರಗತಿವಾಹಿನಿ ಸುದ್ದಿ : ಚಲಿಸುತ್ತಿದ್ದ ಕಾರು ಕೆರೆಗೆ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಬೋಂಗೀರ್ ನಲ್ಲಿ ಇಂದು ಬೆಳ್ಳಂ ಬೆಳಗ್ಗೆ ನಡೆದಿದೆ.
ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಜಲಾಲ್ ಪುರ ಕೆರೆಗೆ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತರನ್ನು ಹರ್ಷ, ದಿನೇಶ್, ವಂಶಿ, ಬಾಲು ಹಾಗೂ ವಿನಯ್ ಎಂದು ಗುರುತಿಸಲಾಗಿದ್ದು ಎಲ್ಲರೂ ಎಲ್‌ಬಿ ನಗರ ನಿವಾಸಿಗಳಾಗಿದ್ದಾರೆ. ಕಾರಿನಲ್ಲಿದ್ದ ಆರು ಜನರ ಪೈಕಿ ಒಬ್ಬ ಮಾತ್ರ ಜೀವಾಪಾಯದಿಂದ ಪಾರಾಗಿದ್ದಾನೆ.
ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಕೈಗೊಂಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಯಡಾದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ