
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದ ಬಳಿ ನಿಲ್ಲಿಸಿದ್ದ ಕಾರಿ ಇದ್ದಕ್ಕಿದ್ದಂತೆ ಬೆಂಕಿಗಾಹುತಿಯಾಗಿದ್ದು, ನಡುರಸ್ತೆಯಲ್ಲಿಯೇ ಧಗ ಧಗನೆ ಹೊತ್ತಿ ಉರಿದಿದೆ.
ಸಿಎಂ ಅಧಿಕೃತ ನಿವಾಸ ಕಾವೇರಿ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ. ಸುತ್ತಮುತ್ತ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ. ಘಟನಾ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ರಸ್ತೆ ಮಧ್ಯೆಯೇ ಕಾರೊಂದು ಬೆಂಕಿಗಾಹುತಿಯಾಗುತ್ತಿದ್ದಂತೆ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಬೆಂಕಿ ಅವಘಡದಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.