Kannada NewsKarnataka NewsLatest
*ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಕಾರು*

ಪ್ರಗತಿವಾಹಿನಿ ಸುದ್ದಿ: ಇಂಜಿನ್ ಓವರ್ ಹೀಟ್ ಆಗಿ ಚಲಿಸುತ್ತಿದ್ದ ಕಾರು ಬೆಂಕಿಗಾಹುತಿಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಸರ್ದಾರ್ ವಲ್ಲಭಬಾಯ್ ಪಟೇಲ್ ವೃತ್ತದ ಬಳಿ ನಡೆದಿದೆ.
ರಾಹುಲ್ ಗುತ್ತೇದಾರ್ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಕಾರಿನಲ್ಲಿದ್ದ ಮಹಿಳೆ, ಮಕ್ಕಳನ್ನು ಕೆಳಗಿಳಿಸ್ದ ಚಾಲಕ ತಾನೂ ಕಾರಿನಿಂದ ಕೆಳಗಿಳಿದಿದ್ದಾನೆ. ಅಷ್ಟರಲ್ಲಿ ಏಕಾಏಕಿ ಕಾರಿನ ತುಂಬೆಲ್ಲ ಬೆಂಕಿ ಆವರಿಸಿ ಹೊತ್ತಿ ಉರಿದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.
ಬೆಂಕಿ ನಂದಿಸುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


