ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಹೊತ್ತಿ ಉರಿದ ಘಟನೆ ಉಡುಪಿಯಲ್ಲಿ ನಡೆದಿದೆ.
ತಾಂತ್ರಿಕ ದೋಷದಿಂದಾಗಿ ಕಾರು ಕ್ಷಣಾರ್ಧದಲ್ಲಿ ಧಗಧಗನೆ ಹೊತ್ತಿ ಉರುದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಫ್ಲೈಓವರ್ ನಲ್ಲಿ ಈ ಘಟನೆ ನಡೆದಿದೆ.
ಕಾರಿನಲ್ಲಿದ್ದ ಇಬ್ಬರು ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಕಾರು ಸುಟ್ಟು ಕರಕಲಾಗಿದೆ.



