Kannada NewsKarnataka NewsLatest

*ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಫ್ಲೈಓವರ್ ಮೇಲೆಯೇ ಹೊತ್ತಿ ಉರಿದ ಕಾರು*

ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಹೊತ್ತಿ ಉರಿದ ಘಟನೆ ಉಡುಪಿಯಲ್ಲಿ ನಡೆದಿದೆ.

ತಾಂತ್ರಿಕ ದೋಷದಿಂದಾಗಿ ಕಾರು ಕ್ಷಣಾರ್ಧದಲ್ಲಿ ಧಗಧಗನೆ ಹೊತ್ತಿ ಉರುದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಫ್ಲೈಓವರ್ ನಲ್ಲಿ ಈ ಘಟನೆ ನಡೆದಿದೆ.

ಕಾರಿನಲ್ಲಿದ್ದ ಇಬ್ಬರು ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಕಾರು ಸುಟ್ಟು ಕರಕಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button