Cancer Hospital 2
Beereshwara 33
LaxmiTai 5

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:  ಇಬ್ಬರು ಸಾವು

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದ ಹೊರವಲಯದಲ್ಲಿ ನಡೆದಿದೆ.

Emergency Service

ಪಾಲಬಾವಿ ಗ್ರಾಮದ ಮಹಾಲಿಂಗ ಗುರುಪಾದ ನಿಂಗನೂರು (47) ಹಾಗೂ ಈರಪ್ಪ ಚನ್ನಬಸು ಉಗಾರೆ (32) ಮೃತಪಟ್ಟವರು. ಚಾಲಕನ ಬೇಜವಾಬ್ದಾರಿ ತನದಿಂದ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದೆ. ಇಮಾಮ್ ರಾಜೇಸಾಬ ಸನದಿ ಎಂಬಾತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹಾರೂಗೇರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕಾರು ಚಾಲಕ ಸದ್ದಾಂ ಹಟಲಸಾಬ್ ಪಠಾಣ ಕಾರು ಪಲ್ಟಿಯಾಗುತ್ತಿದ್ದಂತೆ ಪರಾರಿಯಾಗಿದ್ದಾನೆ‌. ಈ ಕುರಿತು ಹಾರೂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bottom Add3
Bottom Ad 2