ಪ್ರಗತಿವಾಹಿನಿ ಸುದ್ದಿ: ಕಾರೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕೇರಳದ ಕಲರ್ಕೋಡುನಲ್ಲಿ ನಡೆದಿದೆ.
ಮೃತರನ್ನು ಲಕ್ಷದ್ವೀಪ ಮೂಲದ ದೇವಾನಂದನ್ ಮತ್ತು ಮುಹಮ್ಮದ್ ಇಬ್ರಾಹಿಂ, ಆಯುಷ್ ಶಾಜಿ, ಶ್ರೀದೀಪ್ ವಲ್ಸನ್ ಮತ್ತು ಮಹಮ್ಮದ್ ಜಬ್ಬಾರ್ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಅಲಪ್ಪುಳದ ಟಿಡಿ ಮೆಡಿಕಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದರು. ಭಾರೀ ಮಳೆಯ ನಡುವೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದಿಂದಾಗಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಮೃತರ ಶವಕ್ಕಾಗಿ ರಕ್ಷಣಾ ತಂಡಗಳು ಕಾರನ್ನು ಕತ್ತರಿಸಬೇಕಾಯಿತು. ಅದೇ ರೀತಿ ಘಟನೆ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನೆಲ್ಲರನ್ನು ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ