
ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ದೇವರಕೊಲ್ಲಿಯಲ್ಲಿ ನಡೆದಿದೆ. ರಿಜ್ವಾನ್, ನಹೀದ್, ರಾಕಿಬ್ ಹಾಗೂ ನಿಹಾದ್ ಮೃತ ದುರ್ದೈವಿಗಳು,
ಮೃತ ನಾಲ್ವರೂ ಗೋಣಿಕೊಪ್ಪ ಗ್ರಾಮದ ನಿವಾಸಿಗಳು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
ಮಡಿಕೇರಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.