
ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಅಯ್ಯಪ್ಪ ಭಕ್ತರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ರಾಮನಾಥಪುರಂ ಬಳಿ ಸಂಭವಿಸಿಇದೆ.
ವಂಗರ ರಾಮಕೃಷ್ಣ, ಅಪ್ಪಲನಾಯ್ಡು, ರಾಮು, ಬಂಡಾರು ಚಂದ್ರರಾವ್ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಮನಾಥಪುರಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.
ಶಬರಿಮಲೆ ಅಯ್ಯಪ್ಪ ದರ್ಶನ ಪಡೆದು ರಾಮೇಶ್ವರಂ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಇಂದು ಮುಂಜಾನೆ ಈ ಅಪಘಾತ ಸಂಭವಿಸಿದೆ.



