
ಪ್ರಗತಿವಾಹಿನಿ ಸುದ್ದಿ: ಕಾರು-ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಮಹಾರಾಷ್ಟ್ರ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ- ಅಂಕಲಿ ರಸ್ತೆ ಮಧ್ಯೆ ಸಂಭವಿಸಿದೆ.
ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಸಾಂಗ್ಲಿ ಮೂಲದ ತುಕಾರಾಮ ಕೋಳಿ (72) ರುಕ್ಕಿಣಿ ಕೋಳಿ(62) ಕಲ್ಪಿನಾ ಅಜಿತ ಕೋಳಿ(32) ಮೃತ ದುರ್ದೈವಿಗಳಾಗಿದ್ದಾರೆ.
ಆದಿತ್ಯ ಕೋಳಿ (11)ಅನೋಜ್ ಕೋಳಿ (13) ಕಾರ್ ಚಾಲಕ ಸೇರಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳು ಚಿಕ್ಕೋಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.